ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೋಲಾರ ವತಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸ್ಟಡಿ ಸರ್ಕಲ್ ಯೋಜನೆಯಡಿ ಪರೀಕ್ಷಾ ಪೂರ್ವ ತರಬೇತಿ ತರಗತಿಗಳನ್ನು ನೀಡಲಾಗುತ್ತದೆ.
ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಎಂ.ಎಸ್.ಐ.ಎಲ್. ಬೆಂಗಳೂರು, ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಹಾಗೂ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತಗಳಲ್ಲಿ ಖಾಲಿಯಿರುವ ಹಲವಾರು ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಆಸಕ್ತ ಅಭ್ಯರ್ಥಿಗಳಿಗೆ ಸ್ಟಡಿ ಸರ್ಕಲ್ ಯೋಜನೆಯಡಿ 50 ಗಂಟೆಗಳ ಪರೀಕ್ಷಾ ಪೂರ್ವ ತರಬೇತಿಯನ್ನು ಕೋಲಾರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಆಗಸ್ಟ್ 10, 2023 ರಿಂದ ಆಯೋಜಿಸಲು ಉದ್ದೇಶಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೋಲಾರದಲ್ಲಿ ತಮ್ಮ ಹೆಸರನ್ನು ಕಛೇರಿ ವೇಳೆಯಲ್ಲಿ ಭೇಟಿ ನೀಡಿ ನೋಂದಾಯಿಸಬಹುದಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9740154413/7353232456 ಗೆ ಸಂಪರ್ಕಿಸಬಹುದು ಎಂದು ಕೋಲಾರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಉದ್ಯೋಗಾಧಿಕಾರಿ(ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.