alex Certify ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ಇಲ್ಲಿದೆ ಮುಖ್ಯ ಮಾಹಿತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ಇಲ್ಲಿದೆ ಮುಖ್ಯ ಮಾಹಿತಿ..!

ಧರ್ಮಸ್ಥಳ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಧಾರ್ಮಿಕ ತಾಣ. ಮಂಜುನಾಥಸ್ವಾಮಿ ನೆಲೆಯೂರಿರುವ ಈ ಊರು ಬಹಳ ಪ್ರಸಿದ್ಧ ಯಾತ್ರಾರ್ಥಿ ಸ್ಥಳವಾಗಿದೆ. ದಿನನಿತ್ಯ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಯಾವಾಗಲೂ ಈ ದೇವಾಲಯ ಭಕ್ತರಿಂದ ಕಿಕ್ಕಿರಿದು ತುಂಬಿರುತ್ತದೆ.

ಇಲ್ಲಿಯ ಆರಾಧ್ಯ ದೈವ ಮಂಜುನಾಥ ಸ್ವಾಮಿಯನ್ನು ಮಂಗಳೂರಿನ ಕದ್ರಿ ಎಂಬಲ್ಲಿಂದ ತಂದು ಉಡುಪಿಯ ಯತ್ರಿಗಳಾದ ಶ್ರೀ ವಾದಿರಾಜರು ಪ್ರತಿಷ್ಠಾಪಿಸಿದರು ಎಂದು ಪ್ರತೀತಿ ಇದೆ. ಈ ದೇವಾಲಯವು ದಾನ ಧರ್ಮಕ್ಕೆ ಪ್ರಸಿದ್ಧವಾಗಿ ಮತ್ತು ಭಕ್ತರಿಗೆ ನೈತಿಕ, ಸಾಂಸ್ಕೃತಿಕ, ಧಾರ್ಮಿಕ ಕೇಂದ್ರವಾಗಿ ಯಕ್ಷಗಾನದ ನಾಡಿನ ಚರಿತ್ರೆಯನ್ನೂ ಅಲಂಕರಿಸುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ದೇವಾಲಯದ ಹಲವು ಮಹತ್ವದ ಮಾಹಿತಿಯನ್ನು ನೀಡಿದೆ.

* ಪಾದಯಾತ್ರಿಗಳು ಮಾರ್ಗದ ಮಧ್ಯೆ ನಡೆಯಬೇಡಿ.
* ರಸ್ತೆಯಲ್ಲಿ ವಾಹನ ದಟ್ಟಣೆ ಜಾಸ್ತಿ ಇರುವುದರಿಂದ ಕಡ್ಡಾಯವಾಗಿ ಉಡುವ ಬಟ್ಟೆಯ ಬೆನ್ನಿನಲ್ಲಿ / ತೋಳಿನಲ್ಲಿ | ತಲೆಯ ದಿರಿಸಿನಲ್ಲಿ ಪ್ರತಿಫಲಕ (Reflector) ಇರಬೇಕು.
* ಪಾದಯಾತ್ರೆಯಲ್ಲಿ ಬರುವಾಗ ಶಿವ ಪಂಚಾಕ್ಷರಿ ಮಂತ್ರ ಪಠಿಸುತ್ತಾ ಬನ್ನಿ.
* ನೀವು ವಾಸ್ತವ್ಯ ಇರುವ ಸ್ಥಳದಲ್ಲಿ ಮತ್ತು ದಾರಿಯಲ್ಲಿ ಬರುವಾಗ ಉಗುಳುವುದು, ಗಲೀಜು ಇತ್ಯಾದಿ ಮಾಡುವುದರಿಂದ ಇತರ ಸದಸ್ಯರನ್ನು ಹೀಯಾಳಿಸಿದಂತಾಗುತ್ತದೆ.
* ತಂಗುವ ಸ್ಥಳ ಅಡುಗೆ ಮಾಡಿದ ಸ್ಥಳವನ್ನು ಸ್ವಯಂಸ್ಪೂರ್ತಿಯಿಂದ ಸ್ವಚ್ಛ ಮಾಡಿರಿ.
* ಪ್ಲಾಸ್ಟಿಕ್ ಬಾಟಲಿ, ಕಸ-ಕಡ್ಡಿಗಳನ್ನು ರಸ್ತೆ ಬದಿಯಲ್ಲಿ ಬಿಸಾಡಬಾರದು. ಸ್ವಚ್ಛತೆ ಕಾಪಾಡಿ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...