ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ಸಾರ್ವತ್ರಿಕ ವರ್ಗಾವಣೆ ನಿಗದಿಪಡಿಸಲಾಗಿದ್ದ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ.
ಎಲ್ಲ ವೃಂದಗಳಿಗೆ (ಗ್ರೂಪ್ ಎ, ಬಿ, ಸಿ. ಡಿ) ಅನ್ವಯವಾಗುವಂತೆ ವರ್ಗಾವಣೆ ಅವಧಿಯನ್ನು ವಿಸ್ತರಿಸಲಾಗಿದ್ದು ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದಬಲದ ಶೇಕಡಾ 6 ಮೀರದಂತೆ ವರ್ಗಾವಣೆ ಪ್ರಕ್ರಿಯೆ ನಡೆಸುವ ಅಧಿಕಾರವನ್ನು ಆಯಾ ಇಲಾಖೆಗಳ ಸಚಿವರಿಗೆ ನೀಡಲಾಗಿದೆ.
ಸಾರ್ವತ್ರಿಕ ವರ್ಗಾವಣೆಗೆ ಜೂನ್ 15 ರಂದು ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಜುಲೈ 9 ರವರೆಗೆ ಇದನ್ನು ನಿಗದಿಪಡಿಸಿತ್ತು. ಇದೀಗ ಜನಪ್ರತಿನಿಧಿಗಳ ಒತ್ತಡದ ಮೇರೆಗೆ ಜುಲೈ 15 ರ ವರೆಗೆ ಇದನ್ನು ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.