ಯಾವುದೇ ರಾಜ್ಯಗಳಲ್ಲಿ ಅಪರಾಧ ಪ್ರಕರಣಗಳು ನಡೆದ ಸಂದರ್ಭದಲ್ಲಿ ಪ್ರತಿಪಕ್ಷಗಳಿಂದ ಸಿಬಿಐ ತನಿಖೆಗೆ ಒತ್ತಾಯ ಕೇಳಿ ಬರುತ್ತದೆ. ಆದರೆ ಸಿಬಿಐ, ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಕಾರಣ ಇದರ ದುರುಪಯೋಗವಾಗುತ್ತಿದೆ ಎಂಬ ಮಾತುಗಳೂ ಸಹ ಆಗಾಗ ಕೇಳಿ ಬರುತ್ತದೆ.
ದಿಲ್ಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ 1946ರ ಸೆಕ್ಷನ್ 6ರ ಪ್ರಕಾರ ಸಿಬಿಐ ಪ್ರಕರಣದ ತನಿಖೆ ಕೈಗೊಳ್ಳಲು ಆಯಾ ರಾಜ್ಯ ಸರ್ಕಾರಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಆದರೆ 10 ರಾಜ್ಯಗಳು ಈವರೆಗೆ ಸಿಬಿಐ ತನಿಖೆಗೆ ನೀಡಿದ್ದ ಒಪ್ಪಿಗೆಯನ್ನು ಹಿಂಪಡೆದಿವೆ.
ಕೇಂದ್ರ ಸಿಬ್ಬಂದಿ ಸಚಿವಾಲಯದ ಸಹಾಯಕ ಖಾತೆ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಈ ಮಾಹಿತಿ ನೀಡಿದ್ದು, ತಮಿಳುನಾಡು, ತೆಲಂಗಾಣ, ಕೇರಳ, ಪಂಜಾಬ್, ಜಾರ್ಖಂಡ್, ರಾಜಸ್ಥಾನ, ಛತ್ತೀಸ್ಗಡ, ಪಶ್ಚಿಮ ಬಂಗಾಳ, ಮಿಜೋರಾಂ ಹಾಗೂ ಮೇಘಾಲಯ ರಾಜ್ಯಗಳು ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದಿವೆ ಎಂದಿದ್ದಾರೆ.