
ಬೆಂಗಳೂರು :ಕೌನ್ಸಿಲಿಂಗ್ ಮೂಲಕ ವರ್ಗಾವಣಿಗೊಂಡ ಶಿಕ್ಷಕರನ್ನು ಕೂಡಲೇ ಬಿಡುಗಡೆ ಮಾಡಲು ಸಂಬಂಧಿಸಿದವರಿಗೆ ಸೂಚನೆ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಕೌನ್ಸಿಲಿಂಗ್ ಮೂಲಕ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದ್ದು, ವರ್ಗಾವಣೆಗೊಂಡ ಶಿಕ್ಷಕರ ಸ್ಥಳಗಳಿಗೆ ಗೌರವ ಅತಿಥಿ ಶಿಕ್ಷಕರನ್ನು ಸಹ ನಿಯೋಜಿಸಲಾಗಿದೆ. ಆದರೂ ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆ ಮಾಡುತ್ತಿಲ್ಲವೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ಇವರು ನನ್ನನ್ನು ಭೇಟಿ ಮಾಡಿ, ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆ ಮಾಡಲು ಸೂಚನೆ ನೀಡುವಂತೆ ದಿನಾಂಕ: 27.09.2023ರಂದು ಮನವಿ ಪತ್ರ ಸಲ್ಲಿಸಿ, ಕೋರಿರುತ್ತಾರೆ. ಮೂಲ ಮನವಿ ಪತ್ರವನ್ನು ಲಗತ್ತಿಸಿದೆ.
ಆದ್ದರಿಂದ, ಗೌರವ ಅತಿಥಿ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ನಂತರ ಕೌನ್ಸಿಲಿಂಗ್ ಮೂಲಕ ವರ್ಗಾವಣಿಗೊಂಡ ಶಿಕ್ಷಕರನ್ನು ಕೂಡಲೇ ಬಿಡುಗಡೆ ಮಾಡಲು ಸಂಬಂಧಿಸಿದವರಿಗೆ ಸೂಚನೆ ನೀಡಲು ಸೂಚಿಸಲಾಗಿದೆ.
