ಕೊತ್ತಂಬರಿ ಸೊಪ್ಪನ್ನು ಹೆಚ್ಚಾಗಿ ಅಡುಗೆಗೆ ಬಳಸುತ್ತಾರೆ. ಇದು ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು. ಇದು ಕೂದಲಿನ ಬೆಳವಣಿಗೆಗೆ ಕೂಡ ಇದು ಉತ್ತಮವಾಗಿದೆ. ಹಾಗಾಗಿ ಕೂದಲಿನ ಆರೋಗ್ಯಕ್ಕಾಗಿ ಕೊತ್ತಂಬರಿ ಸೊಪ್ಪನ್ನು ಈ ರೀತಿಯಲ್ಲಿ ಬಳಸಿ.
ಕೊತ್ತಂಬರಿ ಸೊಪ್ಪನ್ನು ಸ್ವಲ್ಪ ನೀರು ಬೆರೆಸಿ ಪೇಸ್ಟ್ ಮಾಡಿ ನೆತ್ತಿಗೆ ಹಚ್ಚಿ 20 ನಿಮಿಷ ಬಿಟ್ಟು ಕೂದಲನ್ನು ವಾಶ್ ಮಾಡಿ, ಇದನ್ನು ವಾರಕ್ಕೆ 2 ಬಾರಿ ಮಾಡಿ.
ಕೊತ್ತಂಬರಿ ಸೊಪ್ಪನ್ನು ತೆಗೆದುಕೊಂಡು 15 ನಿಮಿಷಗಳ ಕಾಲ ನೀರಿನಲ್ಲಿ ಕುದಿಸಿ ಬಾಟಲಿನಲ್ಲಿ ಸಂಗ್ರಹಿಸಿ ಇಡಿ. ಈ ನೀರನ್ನು ಕೂದಲಿನ ಬುಡಕ್ಕೆ ಹಚ್ಚಿ 15 ನಿಮಿಷ ಮಸಾಜ್ ಮಾಡಿ. ಬಳಿಕ ಕೂದಲನ್ನು ಶಾಂಪೂ ಬಳಸಿ ವಾಶ್ ಮಾಡಿ ಇದು ಕೂದಲಿಗೆ ನೈಸರ್ಗಿಕ ಹೊಳಪನ್ನು ನೀಡುತ್ತದೆ.