
ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ www.schooleducation.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು.
ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ದಿನಾಂಕ:14/07/2023 ರಿಂದ 05/08/2023 ರವರೆಗೆ ಅವಕಾಶ ಕಲ್ಪಿಸಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಲಾದ ಸೂಚನೆಗಳನ್ನು ಡೌನ್ ಲೋಡ್ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು, ಅದರಂತೆ ಸೂಕ್ತ ಸಿದ್ಧತೆಯೊಂದಿಗೆ ಆನ್ ಲೈನ್ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ www.schooleducation.kar.nic.in ಭೇಟಿ ನೀಡಿ.
