![](https://kannadadunia.com/wp-content/uploads/2022/01/07-1444194258-teacher345-22.jpg)
ಬೆಂಗಳೂರು : 2023-24ನೇ ಸಾಲಿನ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳ ಆಯೋಜನೆಯ ದಿನಾಂಕ ಮತ್ತು ಸ್ಥಳದ ಕುರಿತಂತೆ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಗಳನ್ನಯ, ದಿನಾಂಕ: 30-01-2024 ಮತ್ತು 31-01-2024 ರಂದು ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳ ಕಾರ್ಯಕ್ರಮವನ್ನು ತುಮಕೂರಿನ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ, ಅಶೋಕ ರಸ್ತೆ, ತುಮಕೂರು- ಇಲ್ಲಿ ನಡೆಸಲಾಗುತ್ತಿದೆ.
ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಸ್ತ್ರತವಾದ ಮಾಹಿತಿಯನ್ನು ಪ್ರತ್ಯೇಕ ಸುತ್ತೋಲೆಯಲ್ಲಿ ನಂತರ ತಿಳಿಸಲಾಗುವುದು ಎಂದು ತಿಳಿಸಿದೆ.