ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಆರೋಪಿ ಮೇಲೆ ಮಾನವ ಕಳ್ಳಸಾಗಾಣೆ ಸೇರಿ ಹಲವು ಪ್ರಕರಣಗಳು ದಾಖಲಾಗಿತ್ತು.
ಆರೋಪಿಯನ್ನು ಬಳ್ಳಾರಿ ಜೈಲಿನಲ್ಲಿಡುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಆರೋಪಿ ಅನಿಲ್ ಕುಮಾರ್ ರೆಡ್ಡಿ ಸ್ಪಾ ಹೆಸರಲ್ಲಿ ಬೆಂಗಳೂರು ನಗರ, ಆಂಧ್ರಪ್ರದೇಶದಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಹೆಚ್ಚಿನ ಸಂಬಳ ಆಮಿಷವೊಡ್ಡಿ ಮಾನವ ಕಳ್ಳಸಾಗಣೆ ಮೂಲಕ ಕರೆಸಿಕೊಂಡು ಅವರನ್ನು ಅಕ್ರಮ ಬಂಧನದಲ್ಲಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದ. ಇದೀಗ ಗೂಂಡಾ ಕಾಯ್ದೆಯಡಿ ಆತನನ್ನು ಬಂಧಿಸಲಾಗಿದ್ದು, ಬಳ್ಳಾರಿ ಜೈಲಿನಲ್ಲಿಡಲು ಕಮಿಷ್ನರ್ ಆದೇಶ ಹೊರಡಿಸಿದ್ದಾರೆ.