ಬೆಂಗಳೂರು: ಗಂಡನ ವಿವಾಹೇತರ ಸಂಗಾತಿ ಪ್ರತಿವಾದಿಯಲ್ಲವೆಂದು ಹೈಕೋರ್ಟ್ ಹೇಳಿದ್ದು, ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.
ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿ ದಾಖಲಾದ ಪ್ರಕರಣದಲ್ಲಿ ಕುಟುಂಬ ಸದಸ್ಯರಲ್ಲದವರನ್ನು ಪ್ರತಿವಾದಿಯಾಗಿಸಲು ಅವಕಾಶವಿಲ್ಲವೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ವಿವಾಹೇತರ ಸಂಬಂಧ ಹೊಂದಿದ್ದ ಆರೋಪದಲ್ಲಿ ಪತಿಯ ವಿರುದ್ಧ ಪತ್ನಿ ದಾಖಲಿಸಿದ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯನ್ನು ಪ್ರತಿವಾದಿಯಾಗಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.
ಪತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿರುವ ಮಹಿಳೆ ನನಗೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಪತ್ನಿ ಅರಕಲಗೋಡು ಜೆಎಂಎಫ್ಸಿ ಕೋರ್ಟ್ ನಲ್ಲಿ, ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರ ಮಹಿಳೆಯನ್ನು ಪ್ರಕರಣದಲ್ಲಿ ಪ್ರತಿವಾದಿಯಾಗಿಸಿತ್ತು. ಈ ಆದೇಶ ರದ್ದು ಮಾಡಬೇಕೆಂದು ಕೋರಿ ಅರ್ಜಿದಾರ ಮಹಿಳೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರ ಮಹಿಳೆಯ ವಿರುದ್ಧ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕಾಯ್ದೆ, ಅನ್ವಯ ಕೇಸು ದಾಖಲಿಸಲಾಗಿದೆ. ಆದರೆ, ದೂರುದಾರ ಮಹಿಳೆ ಕುಟುಂಬ ಸದಸ್ಯರಲ್ಲ. ಗಂಡನೊಂದಿಗೆ ಸೇರಿ ಪತ್ನಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲು ಯಾವುದೇ ಸಾಕ್ಷ್ಯವಿಲ್ಲ ಎಂದಿರುವ ಕೋರ್ಟ್ ವಿವಾಹೇತರ ಸಂಬಂಧದ ಮಹಿಳೆಗೆ ಕೌಟುಂಬಿಕ ದೌರ್ಜನ್ಯ ಕೇಸ್ ನಿಂದ ಮುಕ್ತಿ ನೀಡಿದೆ ಎನ್ನಲಾಗಿದೆ.