ಬೆಂಗಳೂರು: ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ರಾಜ್ಯ ಸರ್ಕಾರ ಉಪ ವಿಭಾಗಾಧಿಕಾರಿಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ ಅಧಿಕಾರ ನೀಡಿತ್ತು.
ಇದಕ್ಕಾಗಿ ಕರ್ನಾಟಕ ಜನನ ಮರಣಗಳ ನೋಂದಣಿ ತಿದ್ದುಪಡಿ ಅಧಿನಿಯಮಗಳು -2022 ಜಾರಿಗೊಳಿಸಿದ್ದು, ಇದನ್ನು ಹೈಕೋರ್ಟ್ ರದ್ದುಪಡಿಸಿದೆ. ಬೀದರ್ ವಕೀಲರ ಸಂಘದ ಅಧ್ಯಕ್ಷ ಸುದರ್ಶನ ವಿ. ಬಿರಾದಾರ ಅವರು ಜನನ ಮರಣ ನೋಂದಣಿ ತಿದ್ದುಪಡಿ ನಿಯಮಗಳು ಜಾರಿಗೆ ಸಂಬಂಧಿಸಿದಂತೆ 2022ರ ಜುಲೈ 18ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸಬೇಕೆಂದು ಅರ್ಜಿ ಸಲ್ಲಿಸಿದ್ದರು.
ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಅರ್ಜಿಯನ್ನು ಪುರಸ್ಕರಿಸಿ ತಿದ್ದುಪಡಿ ಅಧಿಸೂಚನೆ ರದ್ದು ಮಾಡಿದೆ. ಹಿಂದಿನಂತೆಯೇ ಜನನ ಮರಣಗಳ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನಿಸುವ ಅಧಿಕಾರ ಜೆಎಮ್ಎಫ್ಸಿ ಕೋರ್ಟ್ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಲಾಗಿದೆ.