
ಬೆಂಗಳೂರು: ಸರ್ಕಾರಿ ಶಾಲೆಯ ಗೋಡೆಯ ಮೇಲೆ ‘ಹಿಜಾಬ್ ನಮ್ಮ ಘನತೆ’ ಎಂದು ಬರಹ ಬರೆದಿದ್ದ ಇಬ್ಬರು ಯುವಕರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ವಿಜಯನಗರ ಜಿಲ್ಲೆ ಹೊಸಪೇಟೆ ಸರ್ಕಾರಿ ಶಾಲೆಯ ಗೋಡೆಯ ಮೇಲೆ ಹಿಜಾಬ್ ನಮ್ಮ ಘನತೆ ಎಂದು ಬರಹ ಬರೆಯಲಾಗಿತ್ತು. ಮುಜಾಮಿಲ್ ಮತ್ತು ಮೊಹಮ್ಮದ್ ಜಮಾಲ್ ವಿರುದ್ಧ ಕೇಸು ದಾಖಲಾಗಿತ್ತು. ತೆರೆದ ಪ್ರದೇಶಗಳ ವಿರೂಪ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಕಾಯ್ದೆ ಹೊಸಪೇಟೆ ಪಟ್ಟಣಕ್ಕೆ ಅನ್ವಯವಾಗುವುದಿಲ್ಲವೆಂದು ವಾದ ಮಂಡಿಸಲಾಗಿದೆ.
ಕಾಯ್ದೆ ಹೊಸಪೇಟೆಗೆ ಅನ್ವಯಿಸಲು ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ ಎನ್ನಲಾಗಿದ್ದು, ಅರ್ಜಿದಾರರ ವಾದವನ್ನು ಪುರಸ್ಕರಿಸಿದ ಹೈಕೋರ್ಟ್ ಕೇಸ್ ರದ್ದುಪಡಿಸಿದೆ. ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ.