ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿರುವ ಹೈಕೋರ್ಟ್ ಏಕಸದಸ್ಯ ಪೀಠ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪರ ವಕೀಲರು ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ಈ ನಡುವೆ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಾದ ಕೇಳದೆಯೇ ಯಾವುದೇ ಆದೇಶವನ್ನು ಹೊರಡಿಸುವಂತಿಲ್ಲ ಎಂದು ಹೈಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡುವ ಅಥವಾ ಆದೇಶ ರದ್ದು ಮಾಡುವ ಅಥವಾ ಯಾವುದೇ ಆದೇಶ ನೀಡುವ ಮೊದಲು ಹೈಕೋರ್ಟ್ ಮೊದಲು ತಮ್ಮ ವಾದವನ್ನು ಸಂಪೂರ್ಣವಾಗಿ ಆಲಿಸಬೇಕು ಎಂದು ರಕ್ಷಣಾತ್ಮಕ ರೀತಿಯಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಕೇವಿಯೆಟ್ ಸಲ್ಲಿಸಿದ್ದಾರೆ.