ಬೆಂಗಳೂರು: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ. ವರಳೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸುವರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ,