
ಬೆಂಗಳೂರು: ಮುಡಾ ಹಗರಣ ಸಂಬಂಧ ಪೊಲೀಸ್ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ತೀರ್ಪು ರದ್ದು ಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಿಗದಿಪಡಿಸಲಾಗಿದೆ.
ಸಿಎಂ ಪರ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಡಾ. ಅಭಿಷೇಕ್ ಮನುಸಿಂಘ್ವಿ ಅವರು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠದ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನೆ ಸಲ್ಲಿಸಿದ್ದಾರೆ.
ಮೇಲ್ಮನವಿಯ ತುರ್ತು ವಿಚಾರಣೆ ಅಗತ್ಯವಿದೆ. ಹೀಗಾಗಿ ಶೀಘ್ರ ವಿಚಾರಣೆಗೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದ್ದು, ಇದನ್ನು ಪರಿಗಣಿಸಿದ ನ್ಯಾಯಪೀಠ ನವೆಂಬರ್ 23ಕ್ಕೆ ಮೇಲ್ಮನವಿ ವಿಚಾರಣೆ ನಿಗದಿಪಡಿಸಿದೆ.