ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಮಾಡುವಂತೆ ಕೋರಿ ಡಿ. ರೂಪಾ ಮೌದ್ಗಿಲ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮಾನನಷ್ಟ ಮೊಕದ್ದಮೆ ರದ್ದುಪಡಿಸುವಂತೆ ಅವರು ಮನವಿ ಮಾಡಿದ್ದು, ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಹಿಂದೆ ಸರಿದಿದ್ದಾರೆ. ಈ ಹಿಂದೆ ವಕೀಲರಾಗಿದ್ದಾಗ ರೋಹಿಣಿ ಸಿಂಧೂರಿ ಪರವಾಗಿ ವಕಾಲತ್ ಹಿನ್ನೆಲೆಯಲ್ಲಿ ಅರ್ಜಿಯನ್ನು ತಮ್ಮ ಪೀಠ ವಿಚಾರಣೆ ನಡೆಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.
ವಿಚಾರಣೆಯಿಂದ ತಾವು ಹಿಂದೆ ಸರಿಯುವುದಾಗಿ ನ್ಯಾಯಮೂರ್ತಿ ಸ್ಪಷ್ಟನೆ ನೀಡಿದ್ದು, ಮತ್ತೊಂದು ಪೀಠದ ಮುಂದೆ ಅರ್ಜಿ ವಿಚಾರಣೆ ನಿಗದಿಗೆ ರಿಜಿಸ್ಟ್ರಿಗೆ ಸೂಚನೆ ನೀಡಲಾಗಿದೆ.