alex Certify 81 ವರ್ಷದ ವೃದ್ಧ ಅಪರಾಧಿಗೆ ವಿಭಿನ್ನ ಶಿಕ್ಷೆ ನೀಡಿದ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

81 ವರ್ಷದ ವೃದ್ಧ ಅಪರಾಧಿಗೆ ವಿಭಿನ್ನ ಶಿಕ್ಷೆ ನೀಡಿದ ಹೈಕೋರ್ಟ್

ಬೆಂಗಳೂರು: 81 ವರ್ಷದ ವೃದ್ಧ ಅಪರಾಧಿಗೆ ಹೈಕೋರ್ಟ್ ವಿಭಿನ್ನ ಶಿಕ್ಷೆ ನೀಡಿದೆ. ಒಂದು ವರ್ಷ ಅಂಗನವಾಡಿಯಲ್ಲಿ ಸಂಬಳವಿಲ್ಲದೆ ಸೇವೆ ಸಲ್ಲಿಸಲು ಆದೇಶ ನೀಡಲಾಗಿದೆ.

ಎರಡು ವರ್ಷದ ಶಿಕ್ಷೆಯನ್ನು ಮೂರು ದಿನಕ್ಕೆ ಹೈಕೋರ್ಟ್ ಇಳಿಸಿದೆ. ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕ ಸದಸ್ಯ ಪೀಠ ಆದೇಶ ನೀಡಿದೆ. 2008ರಲ್ಲಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಐಯ್ತಪ್ಪ ನಾಯ್ಕ ಅವರಿಗೆ ಜಿಲ್ಲಾ ಕೋರ್ಟ್ ಎರಡು ವರ್ಷ ಶಿಕ್ಷೆ ವಿಧಿಸಿತ್ತು.

ಮಕ್ಕಳಿಲ್ಲದ ವೃದ್ಧ ಪತ್ನಿಯನ್ನು ನೋಡಿಕೊಳ್ಳಬೇಕಿದೆ. ತಪ್ಪು ಒಪ್ಪಿಕೊಂಡು ಸಾಮುದಾಯಿಕ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಶಿಕ್ಷೆ ಕಡಿಮೆ ಮಾಡುವಂತೆ ವಕೀಲ ದಿನೇಶ್ ಕುಮಾರ್ ಕೆ. ರಾವ್ ಮನವಿ ಮಾಡಿದ್ದರು. 2023ರ ಫೆಬ್ರವರಿ 20 ರಿಂದ ಮಿತನಡ್ಕ ಅಂಗನವಾಡಿಯಲ್ಲಿ ಒಂದು ವರ್ಷ ಉಚಿತ ಸೇವೆ ಸಲ್ಲಿಸಲು ಹೈಕೋರ್ಟ್ ಆದೇಶ ನೀಡಿದೆ.

ಒಂದು ವರ್ಷ ಅಂಗನವಾಡಿಯಲ್ಲಿ ಸಂಬಳವಿಲ್ಲದೆ ಸೇವೆ ಸಲ್ಲಿಸಲು ಆದೇಶ ನೀಡಲಾಗಿದ್ದು, ಎರಡು ವರ್ಷದ ಶಿಕ್ಷೆಯನ್ನು ಮೂರು ದಿನಕ್ಕೆ ಇಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...