ಬೆಂಗಳೂರು: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದಿಂದ ಭೂ ಸ್ವಾಧೀನ ಮಾಡಿ ಡಿನೋಟಿಫೈ ಮಾಡುವ ಎಲ್ಲಾ ಆದೇಶಗಳು ಮತ್ತು ಅಂತಹ ಅಧಿಸೂಚನೆಗಳನ್ನು ರದ್ದುಗೊಳಿಸುವ ಮುಂದಿನ ಆದೇಶಗಳನ್ನು ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಡಿ ನೋಟಿಫಿಕೇಷನ್ ಮಾಡಿದ್ದ ಕ್ರಮ ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಬಿಡಿಎ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿ ಆದೇಶ ನೀಡಿದೆ.
ಭೂ ಮಾಲೀಕರಾದ ಬಿಡಿಎ ಗಮನಕ್ಕೆ ತಾರದೆ ಡಿ ನೋಟಿಫಿಕೇಶನ್ ಪಡೆದಿರುವ ಆದೇಶವನ್ನು ರದ್ದುಪಡಿಸಿ ನ್ಯಾಯಪೀಠ ಆದೇಶ ಹೊರಡಿಸಿದೆ. ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಭೂಸ್ವಾಧೀನ ಮಾಡಿ ಡಿನೋಟಿಫೈ ಮಾಡುವ ಎಲ್ಲಾ ಆದೇಶಗಳು ಮತ್ತು ಅಂತಹ ಅಧಿಸೂಚನೆಗಳನ್ನು ರದ್ದುಗೊಳಿಸುವ ಮುಂದಿನ ಆದೇಶಗಳನ್ನು ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸುವ ಬಗ್ಗೆ ಶೀಘ್ರವೇ ಸುತ್ತೋಲೆ ಹೊರಡಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.