alex Certify BIG NEWS: ಗ್ಯಾರಂಟಿ ಯೋಜನೆಗಳಿಂದ ಸಿಎಂ ಫೋಟೋ ತೆಗೆಯಲು ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ಯಾರಂಟಿ ಯೋಜನೆಗಳಿಂದ ಸಿಎಂ ಫೋಟೋ ತೆಗೆಯಲು ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಮೊದಲಾದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಹೀರಾತು ಮತ್ತು ಫಲಾನುಭವಿಗಳಿಗೆ ನೀಡಲಾದ ಮಂಜೂರಾತಿ ಪತ್ರದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರ ಹೆಸರು, ಭಾವಚಿತ್ರ ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯಲ್ಲಿ ವಿಚಾರಣೆಗೆ ಪರಿಗಣಿಸುವಂತಹ ಯಾವ ಅಂಶಗಳು ಕಂಡು ಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಅರ್ಜಿ ವಜಾಗೊಳಿಸಿದೆ.

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಜಾಹೀರಾತು, ಮಂಜೂರಾತಿ ಪತ್ರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಭಾವಚಿತ್ರ ಹಾಕಿದ್ದು, ಕೋರ್ಟ್ ಆದೇಶದ ಉಲ್ಲಂಘನೆ ಎಂದು ಅರ್ಜಿದಾರರು ವಾದಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...