alex Certify ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಹೈಕೋರ್ಟ್ ಕಳವಳ; ತನಿಖೆ ನಡೆಸಿ ವರದಿ ಸಲ್ಲಿಕೆಗೆ ಸರ್ಕಾರಕ್ಕೆ ಸೂಚನೆ: ಫೋಟೋ, ವಿಡಿಯೋ ಪ್ರಸಾರಕ್ಕೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಹೈಕೋರ್ಟ್ ಕಳವಳ; ತನಿಖೆ ನಡೆಸಿ ವರದಿ ಸಲ್ಲಿಕೆಗೆ ಸರ್ಕಾರಕ್ಕೆ ಸೂಚನೆ: ಫೋಟೋ, ವಿಡಿಯೋ ಪ್ರಸಾರಕ್ಕೆ ನಿರ್ಬಂಧ

ಬೆಂಗಳೂರು: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ಕರ್ನಾಟಕದಂತಹ ಪ್ರಗತಿಪರ ರಾಜ್ಯದಲ್ಲಿ ಇಂತಹ ಘಟನೆ ಕಳವಳಕಾರಿಯಾಗಿದೆ ಎಂದು ಹೇಳಿರುವ ಹೈಕೋರ್ಟ್, ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ.

ಮಾಧ್ಯಮಗಳಲ್ಲಿ ಸಂತ್ರಸ್ತೆಯ ಫೋಟೋ, ಸಂದರ್ಶನ ಬಿತ್ತರಿಸದಂತೆ ನಿರ್ಬಂಧ ವಿಧಿಸಲಾಗಿದೆ. ಕೆಲವು ಮಾಧ್ಯಮಗಳಲ್ಲಿ ಸಂತ್ರಸ್ತೆಯ ಫೋಟೋ, ವಿಡಿಯೋ ಬಿತ್ತರಿಸಲಾಗುತ್ತಿದೆ. ಇದರಿಂದ ಸಂತ್ರಸ್ತೆಯ ಘನತೆಗೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ. ಆದರೆ, ಘಟನೆಯ ಸುದ್ದಿ ಪ್ರಸಾರಕ್ಕೆ ಯಾವುದೇ ನಿರ್ಬಂಧವಿಲ್ಲ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಪೀಠ ಆದೇಶ ನೀಡಿದೆ. ಭಾನುವಾರ ಮಧ್ಯರಾತ್ರಿ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...