ಹೈದರಾಬಾದ್- ಕರ್ನಾಟಕ ಮೀಸಲಾತಿಯಡಿ ನೇಮಕಗೊಂಡ ನೌಕರರ ವರ್ಗಾವಣೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಹೈದರಾಬಾದ್ -ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಮೀಸಲಾತಿ ಅಡಿ ನೇಮಕವಾದ ಸರ್ಕಾರಿ ನೌಕರರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹೈದರಾಬಾದ್ ಕರ್ನಾಟಕ ಪ್ರದೇಶದಿಂದ ಹೊರ ಭಾಗಗಳಿಗೆ ವರ್ಗಾವಣೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.

ಹೈದರಾಬಾದ್ -ಕರ್ನಾಟಕ ಪ್ರದೇಶ ಮೀಸಲಾತಿ ಅಡಿಯಲ್ಲಿ ನೇಮಕವಾಗಿದ್ದ ಸಬ್ ರಿಜಿಸ್ಟ್ರಾರ್ ಎನ್. ಶ್ರೀಕಾಂತ್ ಅವರನ್ನು ವರ್ಗಾವಣೆ ಮಾಡಿದ ಸರ್ಕಾರದ ಕ್ರಮವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ಎತ್ತಿ ಹಿಡಿದಿತ್ತು. ಈ ಆದೇಶ ಪ್ರಶ್ನಿಸಿ ಮತ್ತೊಬ್ಬ ಸಬ್ ರಿಜಿಸ್ಟ್ರಾರ್ ಎಸ್. ನಂದೀಶ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆದಿದ್ದು, ಹೈದರಾಬಾದ್ -ಕರ್ನಾಟಕ ವ್ಯಾಪ್ತಿ ವರ್ಗಾವಣೆಗೆ ನಿರ್ಬಂಧವಿಲ್ಲ ಎಂದು ಆದೇಶ ನೀಡಿದೆ.

ಕರ್ನಾಟಕ ಸಾರ್ವಜನಿಕ ಉದ್ಯೋಗ(ಹೈದರಾಬಾದ್ -ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲು) ಆದೇಶ 2013ರಲ್ಲಿ ಹೈದರಾಬಾದ್- ಕರ್ನಾಟಕ ಮೀಸಲು ಅಡಿಯಲ್ಲಿ ನೇಮಕವಾದವರನ್ನು ಹೊರ ವ್ಯಾಪ್ತಿಗೆ ವರ್ಗಾವಣೆ ಮಾಡಲು ಸಂಬಂಧಿಸಿದಂತೆ ಯಾವುದೇ ನಿರ್ಬಂಧವಿಲ್ಲ. ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಹೊರ ಪ್ರದೇಶಕ್ಕೆ ವರ್ಗಾವಣೆ ಮಾಡಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read