ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಇಡುಗಂಡು ಹೆಚ್ಚಿಸುವ ಬಗ್ಗೆ ಎರಡು ತಿಂಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ನಿರ್ದೇಶನ ನೀಡಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ವೇಳೆ ನೀಡುವ ಇಡುಗಂಟನ್ನು 50 ಸಾವಿರದಿಂದ ಒಂದು ಲಕ್ಷ ರೂಪಾಯಿಗೆ ಹೆಚ್ಚಳ ಮಾಡುವಂತೆ ಕೋರಲಾಗಿತ್ತು. ಅದೇ ರೀತಿ ಸಹಾಯಕಿಯರಿಗೆ 30 ಸಾವಿರದಿಂದ 50 ಸಾವಿರ ರೂ.ಗೆ ಹೆಚ್ಚಳ ಮಾಡುವಂತೆ ಕೋರಲಾಗಿದೆ.
ಬಡವರೇ ಹೆಚ್ಚಾಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಕಡಿಮೆ ವೇತನ ಇದೆ. ಸಮಾಜದ ಕೆಳಸ್ತರದವರಿಗೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈ ಅಂಶವನ್ನೂ ಪರಿಗಣಿಸಿ ಸರ್ಕಾರ ತೀರ್ಮಾನಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಸರ್ಕಾರಕ್ಕೆ ನ್ಯಾಯಮೂರ್ತಿ ಎನ್.ಎಸ್. ಸಂಜಯ ಗೌಡ ಅವರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.