
ಬೆಂಗಳೂರು: ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠ ಮಹತ್ವದ ಆದೇಶ ಹೊರಡಿಸಿದೆ.
ವಿಧಾನಪರಿಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೇಳಲಾಗಿದೆ. ಎಂ.ಕೆ. ಪ್ರಾಣೇಶ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಲಾಗಿದೆ. ನಾಮನಿರ್ದೇಶಿತ ಸದಸ್ಯರ ಮತದಾನ ಪ್ರಶ್ನಿಸಿ ಪ್ರಾಣೇಶ್ ಅವರು ಅರ್ಜಿ ಸಲ್ಲಿಸಿದ್ದು, ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ ಎನ್ನಲಾಗಿದೆ.