
ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿಯಾದ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸುವ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ಏಕ ಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜಯಲಲಿತಾ ಅವರ ಪರ ವಾರಸುದಾರರಾದ ಜೆ. ದೀಪಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮಾರ್ಚ್ 6, 7ರಂದು ತಮಿಳುನಾಡು ಸರ್ಕಾರಕ್ಕೆ ಒಡವೆಗಳನ್ನು ಹಸ್ತಾಂತರ ಮಾಡಬೇಕಿತ್ತು, ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆಯಾಗಿದೆ ಎಂದು ಜಯಲಲಿತಾ ಅವರ ವಾರಸುದಾರರಾದ ಜೆ. ದೀಪಾ ಪರವಾಗಿ ವಕೀಲರು ವಾದ ಮಂಡಿಸಿದ್ದರು.