
ಬೆಂಗಳೂರು: ರಾಜ್ಯ ಹೈಕೋರ್ಟ್ ನಲ್ಲಿ ಖಾಲಿಯಿರುವ 150 ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಲೆ, ವಿಜ್ಞಾನ, ವಾಣಿಜ್ಯ ವ್ಯವಹಾರ ನಿರ್ವಹಣೆ ಹಾಗೂ ಕಂಪ್ಯೂಟರ್ ಅಪ್ಲಿಕೇಶನ್ ವಿಷಯಗಳಲ್ಲಿ ಪದವಿ ಪಡೆದ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಕನ್ನಡ ಮತ್ತು ಆಂಗ್ಲ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.
ಆಯ್ಕೆಯಾದವರಿಗೆ ಅಂಗೀಕೃತ ಭತ್ಯೆಗಳ ಜೊತೆಗೆ 25,500ರೂ ನಿಂದ 81,100 ರೂ. ವೇತನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ನವೆಂಬರ್ 27 ಕೊನೆಯ ದಿನವಾಗಿದೆ. ಮಾಹಿತಿಗಾಗಿ http://Karnataka judiciary.kar.nic ವೆಬ್ ಸೈಟ್ ಗಮನಿಸಬಹುದಾಗಿದೆ.