ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟವರ ಮಕ್ಕಳು ಪರಿಹಾರಕ್ಕೆ ಅರ್ಹರು. ವಿವಾಹಿತ ಹೆಣ್ಣು ಮಕ್ಕಳಿಗೂ ಪರಿಹಾರ ಪಡೆಯಲು ಹಕ್ಕು ಇದೆ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಹೇಳಿದೆ.
ವಿವಾಹಿತ ಹೆಣ್ಣು ಮಕ್ಕಳಿಗೂ ಪರಿಹಾರ ಪಡೆಯಲು ಹಕ್ಕು ಇದೆ ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ತೀರ್ಪು ನೀಡಲಾಗಿದೆ. ರಿಲಯನ್ಸ್ ಜನರಲ್ ಇನ್ಸೂರೆನ್ಸ್ ಮೇಲ್ಮನವಿಯನ್ನು ವಜಾಗೊಳಿಸಿದ ಹೈಕೋರ್ಟ್, ಅವಲಂಬಿತರಷ್ಟೇ ಅಲ್ಲ, ವಯಸ್ಕ ಮಕ್ಕಳು ಕೂಡ ಪರಿಹಾರಕ್ಕೆ ಅರ್ಹರು. ಅಪಘಾತದಲ್ಲಿ ಮೃತರ ಮಕ್ಕಳು ಪರಿಹಾರ ಪಡೆಯಬಹುದು ಎಂದು ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರಿದ್ದ ಏಕ ಸದಸ್ಯ ಪೀಠದಿಂದ ತೀರ್ಪು ನೀಡಲಾಗಿದೆ.