
ಬೆಂಗಳೂರು: ರಾಜಭವನದ ಗಾಜಿನ ಮನೆಯಲ್ಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದೆ.
ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅನಿಲ್ ಭೀಮಸೇನ ಕಟ್ಟಿ, ಉಮೇಶ ಮಂಜುನಾಥ ಭಟ್ ಅಡಿಗ, ತಲಕಾಡು ಗಿರಿಗೌಡ ಶಂಕರಗೌಡ, ಗುರುಸಿದ್ದಯ್ಯ ಬಸವರಾಜ ಚಂದ್ರಶೇಖರ, ಮೃತ್ಯುಂಜಯ ಜೋಶಿ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಪ್ರಮಾಣವಚನ ಬೋಧನೆ ಮಾಡಿದ್ದಾರೆ.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಾದ ವಿ. ಸುನಿಲ್ ಕುಮಾರ್, ಡಾ.ಕೆ. ಸುಧಾಕರ್, ಬಿ.ಸಿ. ನಾಗೇಶ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು.