ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳದ ಅಕ್ರಮಗಳ ಬಗ್ಗೆ ಪ್ರಶ್ನಿಸಿದ್ಧ ಹೈಕೋರ್ಟ್ ನ್ಯಾಯಮೂರ್ತಿಗೆ ಬೆದರಿಕೆ ಹಾಕಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ ಅವರು ಎಸಿಬಿ ಅಕ್ರಮಗಳ ಕುರಿತು ಪ್ರಶ್ನಿಸಿದ್ದಕ್ಕೆ ವರ್ಗಾವಣೆಯ ಬೆದರಿಕೆ ಬಂದಿದೆ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನರ ಹಿತಕ್ಕಾಗಿ ನಾನು ವರ್ಗಾವಣೆಯಾಗಲು ಸಿದ್ದ ಎಂದು ಅವರು ತಿಳಿಸಿದ್ದಾರೆ. ಎಸಿಬಿ ಎಡಿಜಿಪಿ ತುಂಬಾ ಪವರ್ ಫುಲ್ ಆಗಿದ್ದು, ಈ ಬಗ್ಗೆ ನನ್ನ ಸಹ ನ್ಯಾಯಮೂರ್ತಿಗಳ ಬಳಿ ವ್ಯಕ್ತಿಯೊಬ್ಬರು ಹೇಳಿದ್ದಾರೆ. ವರ್ಗಾವಣೆ ಬೆದರಿಕೆ ಎದುರಿಸಲು ನಾನು ಸಿದ್ಧವಾಗಿದ್ದೇನೆ. ಇದಕ್ಕೆಲ್ಲ ಜಗ್ಗುವುದಿಲ್ಲ ಎಂದು ತಿಳಿಸಿದ್ದಾರೆ.