ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲವೆಂದು ಹೈಕೋರ್ಟ್ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.
ಗಾಯತ್ರಿ ಶಾಂತೇಗೌಡ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಪರಿಷತ್ ಚುನಾವಣೆಯಲ್ಲಿ 12 ನಾಮ ನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಮೂರು ಮತಗಳ ಅಂತರದಲ್ಲಿ ಅವರು ಸೋಲು ಅನುಭವಿಸಿದ್ದರು. ಎಂ.ಕೆ. ಪ್ರಾಣೇಶ್ ಚುನಾಯಿತರಾಗಿದ್ದರು.
ಈಗ ವಿಧಾನಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅವರಿಗೆ ಸಂಕಷ್ಟ ಎದುರಾಗಿದೆ. ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.
ವಿಧಾನಪರಿಷತ್ ಚುನಾವಣೆಯಲ್ಲಿ 12 ನಾಮ ನಿರ್ದೇಶಿತರು ಮತದಾನ ಮಾಡಿದ್ದು, ಪರಾಭವಗೊಂಡಿದ್ದ ಗಾಯತ್ರಿ ಶಾಂತೇಗೌಡ ರಿಟ್ ಅರ್ಜಿ ಸಲ್ಲಿಸಿದ್ದರು.