alex Certify BIG NEWS: ಪುತ್ರನ ಆಸ್ತಿಯಲ್ಲಿ ತಾಯಿಗೂ ಹಕ್ಕು: ಹೈಕೋರ್ಟ್ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುತ್ರನ ಆಸ್ತಿಯಲ್ಲಿ ತಾಯಿಗೂ ಹಕ್ಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪುತ್ರನ ಆಸ್ತಿಯಲ್ಲಿ ತಾಯಿಗೂ ಹಕ್ಕು ಇದೆ ಎಂದು ಹೈಕೋರ್ಟ್ ಹೇಳಿದ್ದು, ಹಿಂದೂ ಉತ್ತರಾಧಿಕಾರಿ ಕಾಯ್ದೆಯಡಿ ಮೃತ ಪುತ್ರನ ಆಸ್ತಿಗೆ ತಾಯಿ ಮೊದಲನೇ ವರ್ಗದ ವಾರಸುದಾರರು ಎಂದು ಮಹತ್ವದ  ಆದೇಶ ನೀಡಿದೆ.

ಪತಿ ಬದುಕಿದ್ದರೂ ಪಿತ್ರಾರ್ಜಿತ ಆಸ್ತಿಯಲ್ಲಿ ಪುತ್ರನಿಗೆ ಸೇರಬೇಕಿರುವ ಆಸ್ತಿಯಲ್ಲಿ ತನ್ನ ಪಾಲು ಪಡೆಯಬಹುದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಧೀನ ನ್ಯಾಯಾಲಯದಿಂದ ಮೃತಪಟ್ಟಿರುವ ಪುತ್ರನ ಪಾಲಿನ ಆಸ್ತಿಯಲ್ಲಿ ಪಾಲು ಪಡೆಯಲು ತಾಯಿ ಹಕ್ಕು ಹೊಂದಿಲ್ಲ ಎಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಶೀಲಮ್ಮ ಎಂಬುವರು ಸಲ್ಲಿಸಿದ್ದ ಎರಡನೇ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಆದರೆ ಅರ್ಜಿ ವಿಚಾರಣೆಯ ಹಂತದಲ್ಲಿರುವಾಗಲೇ ಸುಶೀಲಮ್ಮ ಕೂಡ ಮೃತಪಟ್ಟಿದ್ದರು. ಅರ್ಜಿಯಲ್ಲಿ ಸುಶೀಲಮ್ಮ ಅವರನ್ನು ಪಕ್ಷಕಾರರನ್ನಾಗಿ ಮಾಡಿದ ಮೇಲೆ ಅವರು ಮೃತ ಪುತ್ರನ ಮೊದಲನೇ ವರ್ಗದ ವಾರಸುದಾರರಾಗುತ್ತಾರೆ. ಮೃತ ವ್ಯಕ್ತಿ ತನ್ನ ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದು, ಹಿಂದೂ ಅವಿಭಾಜ್ಯ ಕುಟುಂಬದಲ್ಲಿ ಸುಶೀಲಮ್ಮ ಮೊದಲನೇ ವರ್ಗದ ವಾರಸುದಾರರಾಗಲಿದ್ದಾರೆ. ಹೀಗಾಗಿ ಪುತ್ರನ ಆಸ್ತಿಯಲ್ಲಿ ಪಾಲು ಪಡೆಯಲು ಅವರು ಅರ್ಹರಾಗುತ್ತಾರೆ. ಮೊದಲನೇ ಮೇಲ್ಮನವಿ ನ್ಯಾಯಾಲಯದ ನಡೆ ದೋಷಪೂರಿತವಾಗಿದೆ ಎಂದು ಹೈಕೋರ್ಟ್ ಆದೇಶ ನೀಡಿದೆ.

ಸುಶೀಲಮ್ಮನವರ ಪತಿ ಬದುಕಿದ್ದಾರೆ. ಪುತ್ರ ನಿಧನರಾದ ಬಳಿಕ ಸುಶೀಲಮ್ಮ ಪುತ್ರನ ಮೊದಲ ವರ್ಗದ ವಾರಸುದಾರರಾಗುತ್ತಾರೆ. ಇದನ್ನು ವಿಚಾರಣಾ ದಿನ ನ್ಯಾಯಾಲಯ ಪರಿಗಣಿಸಿಲ್ಲ. ಅಲ್ಲದೇ ತಾಯಿಯನ್ನು ದಾಯಾದಿ ಎಂದು ಪರಿಗಣಿಸಲಾಗುವುದಿಲ್ಲ. ಆಕೆ ಪಿತ್ರಾರ್ಜಿತ ಅಥವಾ ಜಂಟಿ ಆಸ್ತಿಯಲ್ಲಿ ಪಾಲು ಕೋರಲಾಗದು ಎಂದು ತಪ್ಪಾಗಿ ಆದೆಶಿಸಲಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಸುಶೀಲಮ್ಮನವರ ಪುತ್ರನ ಪತ್ನಿ ಮತ್ತು ಪುತ್ರ ಪೂರ್ವಜರ ಆಸ್ತಿಯಲ್ಲಿ ಪಾಲು ನೀಡುವಂತೆ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸುವಾಗ ತನ್ನನ್ನು ಪಕ್ಷಕಾರರರನ್ನಾಗಿ ವಿಚಾರಣಾ ಮತ್ತು ಪ್ರಥಮ ಮೇಲ್ಮನವಿ ನ್ಯಾಯಾಲಯಗಳು ಪರಿಗಣಿಸಿಲ್ಲ, ಅವುಗಳ ಆದೇಶ ಅಕ್ರಮ, ಅನ್ಯಾಯದಿಂದ ಕೂಡಿದೆ. ನಾನು ಮೃತನ ತಾಯಿಯಾಗಿದ್ದು, ಆತನ ಆಸ್ತಿಯಲ್ಲಿ ಪಾಲು ಬರಬೇಕಿದೆ ಎಂದು ಸಶೀಲಮ್ಮ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಮಾರ್ಪಾಡು ಮಾಡಿದ ಹೈಕೋರ್ಟ್ ತಾಯಿಗೆ ಆಸ್ತಿ ಹಂಚಿಕೆ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...