
ಬೆಂಗಳೂರು: ಚುನಾವಣೆಯಲ್ಲಿ ಸೂಕ್ತ ಆದಾಯ ಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಮೈಸೂರು ಮೇಯರ್ ರುಕ್ಮಿಣಿ ಅವರ ಪಾಲಿಕೆ ಸದಸ್ಯತ್ವ ರದ್ದು ಮಾಡಲಾಗಿದೆ. ಹೈಕೋರ್ಟ್ ರುಕ್ಮಿಣಿ ಅವರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಿದೆ ಎನ್ನಲಾಗಿದೆ.
ಮೈಸೂರು ಪಾಲಿಕೆ 36 ನೇ ವಾರ್ಡ್ ಸದಸ್ಯೆಯಾಗಿರುವ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದು ಮಾಡಿದ ಹಿನ್ನೆಲೆಯಲ್ಲಿ ಮೇಯರ್ ಸ್ಥಾನಕ್ಕೆ ಕಂಟಕ ಎದುರಾಗಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಅವರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.