ಬೆಂಗಳೂರು: ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತು ವಿವಾದ ಉಂಟಾಗಿದ್ದು, ಮೈಸೂರು ಅನಂತಸ್ವಾಮಿ ಅವರ ಧಾಟಿ ಅಳವಡಿಕೆಗೆ ಆಕ್ಷೇಪ ವ್ಯಕ್ತವಾಗಿದೆ.
ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಲಾಗಿದೆ. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ನೋಟಿಸ್ ಜಾರಿ ಮಾಡಲಾಗಿದೆ.
ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಸಂಗೀತ ಸಂಯೋಜನೆ ಮಾಡಲಾಗಿದ್ದು, ಇಡೀ ಹಾಡಿಗೆ ಸಿ. ಅಶ್ವತ್ಥ್ ರಾಗ ಸಂಯೋಜನೆ ಮಾಡಿದ್ದಾರೆ. ಆದರೆ, ಮೈಸೂರು ಅನಂತಸ್ವಾಮಿಯವರ ಧಾಟಿ ಬಳಸಲು ಸರ್ಕಾರ ಆದೇಶ ಹೊರಡಿಸಿದೆ. ಅವರು ಒಂದು ಪಲ್ಲವಿ, ಎರಡು ಚರಣಗಳಿಗೆ ಮಾತ್ರ ರಾಗ ಸಂಯೋಜನೆ ಮಾಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ತುರ್ತು ನೋಟಿಸ್ ಜಾರಿಗೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿದೆ ಎನ್ನಲಾಗಿದೆ.