ಬೆಂಗಳೂರು: ದುಡಿಯಲು ಸಮರ್ಥ ಇರುವ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.
ಪತ್ನಿಯ ಜೀವನಾಂಶದ ಹಣ ಕಡಿಮೆ ಮಾಡಿದ ಹೈಕೋರ್ಟ್, ಮಾಸಿಕ ಜೀವನಾಂಶದ ಮೊತ್ತವನ್ನು 10 ಸಾವಿರ ರೂಪಾಯಿಯಿಂದ 5 ಸಾವಿರ ರೂ.ಗೆ ಇಳಿಕೆ ಮಾಡಲಾಗಿದೆ. ಪತಿಯೊಂದಿಗೆ ವಿವಾಹಕ್ಕೆ ಮೊದಲು ಪತ್ನಿ ಉದ್ಯೋಗದಲ್ಲಿದ್ದರು. ಈಗ ಮತ್ತೆ ಕೆಲಸಕ್ಕೆ ಸೇರದಿರಲು ಸಮರ್ಪಕ ಕಾರಣಗಳಿಲ್ಲ. ಆಲಸ್ಯದಿಂದ ಕುಳಿತು ಪತಿಯಿಂದಲೇ ಸಂಪೂರ್ಣ ಜೀವನಾಂಶ ಕೇಳುವಂತಿಲ್ಲ. ತನ್ನ ಜೀವನ ನಿರ್ವಹಣೆಗೆ ಪತ್ನಿ ಪ್ರಯತ್ನಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
ಪೂರಕ ಜೀವನಾಂಶವನ್ನು ಪತಿಯಿಂದ ಪತ್ನಿ ಕೇಳಬಹುದು ಎಂದು ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.