ಬೆಂಗಳೂರು: ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ನೀಡಲಾಗಿದ್ದು, ಆದಾಯ ತೆರಿಗೆ ಇಲಾಖೆಯ ಮೇಲ್ಮನವಿ ವಜಾಗೊಳಿಸಲಾಗಿದೆ.
ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಗೆ ತೆರಿಗೆ ವಿನಾಯಿತಿ ನೀಡಲಾಗಿದ್ದು, 27.23 ಕೋಟಿ ರೂಪಾಯಿ ಹಣ ದೇಣಿಗೆ ಎಂದು ಟ್ರಸ್ಟ್ ಘೋಷಣೆ ಮಾಡಿತ್ತು. ದೇಣಿಗೆಗೆ ತೆರಿಗೆ ವಿನಾಯಿತಿ ನೀಡಲು ಐಟಿ ಇಲಾಖೆ ನಿರಾಕರಿಸಿತ್ತು. ಆದರೆ, ತೆರಿಗೆ ವಿನಾಯಿತಿ ನೀಡಲು ಮೇಲ್ಮನವಿ ಪ್ರಾಧಿಕಾರ ಆದೇಶ ನೀಡಿತ್ತು.
ಮೇಲ್ಮನವಿ ಪ್ರಾಧಿಕಾರದ ಆದೇಶ ಪ್ರಶ್ನಿಸಿದ ಐಟಿ ಇಲಾಖೆ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ ಎಂದು ಹೇಳಲಾಗಿದೆ.