
ಬೆಂಗಳೂರು: ಪಕ್ಷದ ವಿಪ್ ಉಲ್ಲಂಘನೆ ಮಾಡಿದರೂ ಮುಂಬರುವ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ಯಾವುದೇ ನಿರ್ಬಂಧ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.
ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ಅನರ್ಹಗೊಂಡ ಸ್ಥಳೀಯ ಸಂಸ್ಥೆಯ ಸದಸ್ಯರು ಮುಂಬರುವ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಬಹುದು. ಅವರು ಸ್ಪರ್ಧಿಸಲು ಯಾವುದೇ ನಿರ್ಬಂಧ ಇಲ್ಲ ಎಂದು ಹೈಕೋರ್ಟ್ ಹೇಳಿದೆ.
ವಿಪ್ ಉಲ್ಲಂಘನೆ ಆರೋಪದ ಮೇರೆಗೆ ಅನರ್ಹಗೊಂಡಿದ್ದ ಚಿಂತಾಮಣಿ ನಗರಸಭೆ ಸದಸ್ಯ ಮೊಹಮ್ಮದ್ ಶಫಿಕ್ ನಾಮಪತ್ರ ಅಂಗೀಕರಿಸಿದ್ದ ಚುನಾವಣಾಧಿಕಾರಿ ಕ್ರಮ ಪ್ರಶ್ನಿಸಿ ಜಿಲ್ಲಾ ಜೆಡಿಎಸ್ ಮುಖಂಡ ಕೆ.ಎಂ. ಮುನೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.