alex Certify ಪಕ್ಷದ ವಿಪ್ ಉಲ್ಲಂಘಿಸಿ ಅನರ್ಹಗೊಂಡರೂ ಚುನಾವಣೆಯಲ್ಲಿ ಸ್ಪರ್ಧೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಷದ ವಿಪ್ ಉಲ್ಲಂಘಿಸಿ ಅನರ್ಹಗೊಂಡರೂ ಚುನಾವಣೆಯಲ್ಲಿ ಸ್ಪರ್ಧೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪಕ್ಷದ ವಿಪ್ ಉಲ್ಲಂಘನೆ ಮಾಡಿದರೂ ಮುಂಬರುವ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ಯಾವುದೇ ನಿರ್ಬಂಧ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.

ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ಅನರ್ಹಗೊಂಡ ಸ್ಥಳೀಯ ಸಂಸ್ಥೆಯ ಸದಸ್ಯರು ಮುಂಬರುವ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಬಹುದು. ಅವರು ಸ್ಪರ್ಧಿಸಲು ಯಾವುದೇ ನಿರ್ಬಂಧ ಇಲ್ಲ ಎಂದು ಹೈಕೋರ್ಟ್ ಹೇಳಿದೆ.

ವಿಪ್ ಉಲ್ಲಂಘನೆ ಆರೋಪದ ಮೇರೆಗೆ ಅನರ್ಹಗೊಂಡಿದ್ದ ಚಿಂತಾಮಣಿ ನಗರಸಭೆ ಸದಸ್ಯ ಮೊಹಮ್ಮದ್ ಶಫಿಕ್ ನಾಮಪತ್ರ ಅಂಗೀಕರಿಸಿದ್ದ ಚುನಾವಣಾಧಿಕಾರಿ ಕ್ರಮ ಪ್ರಶ್ನಿಸಿ ಜಿಲ್ಲಾ ಜೆಡಿಎಸ್ ಮುಖಂಡ ಕೆ.ಎಂ. ಮುನೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...