BIG NEWS: ಕೋರ್ಟ್ ಕಲಾಪದ ನೇರ ಪ್ರಸಾರ ದೃಶ್ಯ ಬಳಕೆಗೆ ತಡೆ: ಹೈಕೋರ್ಟ್ ಆದೇಶ

ಬೆಂಗಳೂರು: ನ್ಯಾಯಾಲಯದ ಕಲಾಪದ ನೇರ ಪ್ರಸಾರ ದೃಶ್ಯಗಳನ್ನು ಯಾವುದೇ ಖಾಸಗಿ ವೇದಿಕೆಗಳು ಬಳಸಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

ಕೋರ್ಟ್ ಕಲಾಪದ ದೃಶ್ಯಾವಳಿಗಳ ದುರ್ಬಳಕೆ ತಡೆಗೆ ಕ್ರಮ ಜರುಗಿಸುವಂತೆ ಸಂಬಂಧಿಸಿದ ಪ್ರಾಧಿಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಚಂದನಗೌಡರವರ ಪೀಠದಿಂದ ಈ ಆದೇಶ ನೀಡಲಾಗಿದೆ.

ಹೈಕೋರ್ಟ್ ನ ನೇರ ಪ್ರಸಾರದ ವಿಡಿಯೋ ಬಳಕೆ ಮಾಡಬಾರದು. 2022ರ ಜನವರಿ 1ರಂದು ರಾಜ್ಯ ಹೈಕೋರ್ಟ್ ಜಾರಿಗೊಳಿಸಿದ ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರ ಪ್ರಸಾರ ಮತ್ತು ರೆಕಾರ್ಡಿಂಗ್ ನಿಯಮಗಳು 2021ರ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಖಾಸಗಿ ಡಿಜಿಟಲ್ ವೇದಿಕೆಗಳಾದ ಕಹಳೆ ನ್ಯೂಸ್, ಫ್ಯಾನ್ಸ್ ಟ್ರೋಲ್, ಪ್ರತಿಧ್ವನಿ, ಅವನಿಯಾನ, ರವೀಂದ್ರ ಜೋಶಿ ಕ್ರಿಯೇಷನ್ಸ್ ನಲ್ಲಿ ಬಳಕೆ ಮಾಡಲಾಗಿರುವ ಹೈಕೋರ್ಟ್ ಕಲಾಪದ ವಿಡಿಯೋಗಳನ್ನು ತಕ್ಷಣವೇ ತೆಗೆದು ಹಾಕುವಂತೆ ಯೂಟ್ಯೂಬ್, ಫೇಸ್ ಬುಕ್ ಮತ್ತು ಎಕ್ಸ್ ಕಾರ್ಪ್ ಸಂಸ್ಥೆಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಪ್ರತಿವಾದಿಗಳಾದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್, ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಯೂಟ್ಯೂಬ್, ಫೇಸ್ ಬುಕ್, ಕಹಳೆ ನ್ಯೂಸ್, ಫ್ಯಾನ್ಸ್ ಟ್ರೋಲ್, ಪ್ರತಿಧ್ವನಿ, ಅವನಿಯಾನ ಮತ್ತು ರವೀಂದ್ರ ಜೋಶಿ ಕ್ರಿಯೇಷನ್ಸ್ ಗಳಿಗೆ ನ್ಯಾಯಪೀಠ ನೋಟಿಸ್ ಜಾರಿ ಮಾಡಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read