ಬೆಂಗಳೂರು: ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಸಂಗೀತ ಸಂಯೋಜನೆ ಪ್ರಶ್ನಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮೈಸೂರು ಅನಂತಸ್ವಾಮಿಯವರ ಧಾಟಿ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿಯವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಕಡ್ಡಾಯಗೊಳಿಸಲು ಸರ್ಕಾರಕ್ಕೆ ಅಧಿಕಾರವಿದೆ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಹೇಳಿದೆ. ಇದರೊಂದಿಗೆ ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತಾದ ವಿವಾದಕ್ಕೆ ತೆರೆ ಬಿದ್ದಿದೆ.