
ಬೆಂಗಳೂರು: ಬಿಬಿಎಂಪಿ ಅನುದಾನಗಳ ಅಡಿ ಕೈಗೊಂಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಹಣ ಪಾವತಿಸಬೇಕಿರುವುದನ್ನು ಎಸ್ಐಟಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ.
2019 ರಿಂದ 2023ರ ಮೇ ವರೆಗಿನ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನ, ನಗರೋತ್ಥಾನ ಅನುದಾನ, ಬಿಬಿಎಂಪಿ ಅನುದಾನಗಳ ಅಡಿಯಲ್ಲಿ ಕಾಮಗಾರಿ ಕೈಗೊಳ್ಳಲಾಗಿದ್ದು, ಇವುಗಳ ನಿರ್ವಹಿಸಿದ ಗುತ್ತಿಗೆದಾರರಿಗೆ ಹಣ ಪಾವತಿಸಬೇಕಿದೆ. ಹಣ ಪಾವತಿಸಬೇಕಿರುವ ಕಾಮಗಾರಿಗಳನ್ನು ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ. ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಗುತ್ತಿಗೆದಾರರು ಪ್ರಕರಣ ದಾಖಲಿಸಿದ್ದರು. ಗುತ್ತಿಗೆದಾರರಿಗೆ ಹಣ ಪಾವತಿಸಬೇಕಿರುವುದನ್ನು ಎಸ್ಐಟಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ.