ಬೆಂಗಳೂರು: ಹೈಕೋರ್ಟಿನಿಂದ ಇಂದು ಹಿಜಾಬ್ ಪ್ರಕರಣದ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಅನೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಅಲ್ಲದೆ ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕಲಬುರ್ಗಿ ಜಿಲ್ಲೆಯಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೋಲಾರ ಜಿಲ್ಲೆಯಲ್ಲಿ ಕೂಡ ಇಂದು ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಹೇಳಲಾಗಿದೆ.
ಮಂಗಳವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಆಯ್ಕೆಯ ಪರೀಕ್ಷೆಗಳು ಮೊದಲೇ ನಿಗದಿಯಾದಂತೆ ಮೂರೂ ಕೇಂದ್ರಗಳಲ್ಲಿ(ಶಿವಮೊಗ್ಗದ ಹೆಚ್.ಎಸ್.ಆರ್ ಪದವಿ ಪೂರ್ವ ಕಾಲೇಜು, ಸರ್ಕಾರಿ ಪಪೂ ಕಾಲೇಜು, ಸರ್ಕಾರಿ ಬಾಲಿಕಾ ಪಪೂಕಾಲೇಜು,) ಮಂಗಳವಾರ ನಡೆಯಲಿವೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ.