
ಬೆಂಗಳೂರು: 3 ತಿಂಗಳೊಳಗೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳ ಬಳಿ ಹಾದು ಹೋಗಿರುವ ವಿದ್ಯುತ್ ತಂತಿ ತೆರವುಗೊಳಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮಕ್ಕೆ ಈ ಕುರಿತಾಗಿ ನಿರ್ದೇಶನ ನೀಡಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸ್ಥಿತಿಗತಿ ಕುರಿತಾಗಿ ಹೈಕೋರ್ಟ್ ನಲ್ಲಿ ಸ್ವಯಂ ಪ್ರೇರಿತ ಪಿಐಎಲ್ ಅರ್ಜಿ ವಿಚಾರಣೆ ನಡೆಸಲಾಗಿದೆ. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿದ್ದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಸಿ 3 ತಿಂಗಳೊಳಗೆ ಶಾಲಾ-ಕಾಲೇಜುಗಳ ಬಳಿ ಹಾದು ಹೋಗಿರುವ ವಿದ್ಯುತ್ ತಂತಿ ತೆರವಿಗೆ ಸೂಚನೆ ನೀಡಲಾಗಿದೆ.