alex Certify ಮಾನವೀಯತೆ ಮೆರೆದ ಹೈಕೋರ್ಟ್: ತಾಯಿ ಆರೈಕೆಗೆ ಪುತ್ರನಿಗೆ ಪೆರೋಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ಹೈಕೋರ್ಟ್: ತಾಯಿ ಆರೈಕೆಗೆ ಪುತ್ರನಿಗೆ ಪೆರೋಲ್

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಆರೈಕೆ ಮಾಡಲು ಮತ್ತು ವೈದ್ಯಕೀಯ ಚಿಕಿತ್ಸೆಯ ವೆಚ್ಚ ಭರಿಸಲು ಜೀವಾವಧಿ ಶಿಕ್ಷೆಗೆ ಒಳಗಾದ ಪುತ್ರನಿಗೆ 60 ದಿನ ಪೆರೋಲ್ ಮಂಜೂರು ಮಾಡಿ ಹೈಕೋರ್ಟ್ ಮಾನವೀಯತೆ ಮೆರೆದಿದೆ.

ತನ್ನನ್ನು ಆರೈಕೆ ಮಾಡಲು ಪುತ್ರನಿಗೆ ಪೆರೋಲ್ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಿ ಪಾಂಡವಪುರ ನಿವಾಸಿ ತಶಿನಾ ಬೇಗಮ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ಪುರಸ್ಕರಿಸಿ ಈ ಆದೇಶ ನೀಡಿದೆ.

ಪುತ್ರ ಮಹಮ್ಮದ್ ಸುಹೈಲ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ. ನಾನು ಬೆನ್ನು ನೋವು, ಬಿಪಿ ಮತ್ತಿತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಕಲ್ಪಿಸಲು ಪುತ್ರನಿಗೆ ಅನಿವಾರ್ಯತೆ ಸಾಕಷ್ಟಿದೆ. ಈ ನಿಟ್ಟಿನಲ್ಲಿ ಪೆರೋಲ್ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ ಹೈಕೋರ್ಟ್ 60 ದಿನ ಪೆರೋಲ್ ಮಂಜೂರು ಮಾಡಿ ಮಾನವೀಯತೆ ಮೆರೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...