ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿ 2012ರಲ್ಲಿ ನಡೆದ ಸೌಜನ್ಯ ಅಸಹಜ ಸಾವಿನ ನಂತರ ಮತ್ತು ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಮಾನಿಸುತ್ತಿದೆ.
ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಯಾವುದಾದರೂ ತನಿಖೆ ನಡೆಸಬೇಕೆಂದು ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆ ಮತ್ತು ಹೆಗ್ಗಡೆ ಕುಟುಂಬದವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಬಗ್ಗೆ ಯಾವುದೇ ರೀತಿಯ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದ್ದಾರೆ.
ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿರುವವರು, ಕೋರ್ಟ್ ಮತ್ತು ನ್ಯಾಯಾಧೀಶರನ್ನು ನಿಂದಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಯೋಜನೆ ಮತ್ತು ಹೆಗ್ಗಡೆ ಕುಟುಂಬದದಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.