ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅಭಿಯೋಜಕರನ್ನಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಶ್ರೀರಂಗಪಟ್ಟಣದಲ್ಲಿ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿತ್ತು. ಈ ನೇಮಕ ಪ್ರಶ್ನಿಸಿ ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.