ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿನ ಪ್ರತಿಭಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡಿತ್ತು. ಈ ವೇಳೆ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಯತ್ನಿಸಿದ್ದರು.
ಈ ಸಂಬಂಧ ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.