ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಕಾರ್ಯದರ್ಶಿ ರೂಪಾ ಅವರು ನೀಡಿದ್ದ ಕರ್ತವ್ಯಕ್ಕೆ ಅಡ್ಡಿಪಡಿಸಿದ ದೂರು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸ್ನೇಹಮಯಿ ವಿರುದ್ಧ ದಾಖಲಿಸಿದ ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಚಾಮುಂಡೇಶ್ವರಿ ದೇವಿಗೆ ಬಂದಿರುವ ಹರಕೆ ಸೀರೆ ಮಾರಾಟ ಮಾಡಲಾಗುತ್ತಿದೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಈ ಬಗ್ಗೆ ದೂರು ದಾಖಲಿಸಿಕೊಳ್ಳದೆ ಸ್ನೇಹಮಯಿ ಕೃಷ್ಣ ಅವರ ವಿರುದ್ಧವೇ ಕಾರ್ಯದರ್ಶಿ ರೂಪಾ ದೂರು ನೀಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ದೇವಿಗೆ ಹಾಕಿದ್ದ ಸೀರೆ ಮಾರಾಟವಾಗಿದ್ದರೆ ಅಕ್ಷಮ್ಯ ಅಪರಾಧ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿದ್ದು, ತಡೆಯಾಜ್ಞೆ ನೀಡಿದೆ.