alex Certify BREAKING : ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ನಗರತ್ ಪೇಟೆಯಲ್ಲಿ ಮೊಬೈಲ್ ಅಂಗಡಿ ಮಾಲೀಕ ಮುಕೇಶ್ ಮೇಲೆ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳಿಗರ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ಎಫ್ ಐ ಆರ್ ದಾಖಲಾಗಿತ್ತು.

ಇದೀಗ ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ಎಫ್ ಐ ಆರ್ ಗೆ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲಿನ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 44 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿ ಸೇರಿದಂತೆ 44 ಮಂದಿ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಎಫ್ ಐ ಆರ್ ರದ್ದು ಕೋರಿ ಸಂಸದ ತೇಜಸ್ವಿ ಸೂರ್ಯ ಹೈಕೋರ್ಟ್ ಮೊರೆ ಹೋಗಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...