ಬೆಂಗಳೂರು: ಬೇಲಿಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಕಳ್ಳ ಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತಿತರ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ಅಮಾನತಿನಲ್ಲಿಡುವಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ರದ್ದು ಕೋರಿ ಶಾಸಕ ಸತೀಶ್ ಸೈಲ್, ಖಾರದಪುಡಿ ಮಹೇಶ್, ಉದ್ಯಮಿ ಪ್ರೇಮಚಾಂದ್ ಗಾರ್ಗ್ ಸೇರಿ 7 ಮಂದಿ ಸಲ್ಲಿಸಿದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ತಿರಿಸಿದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಬುಧವಾರ ಪ್ರಕಟಿಸಿದೆ.
ಅರ್ಜಿದಾರರು ಆರು ವಾರದಲ್ಲಿ ದಂಡದ ಮೊತ್ತದ ಶೇಕಡ 25ರಷ್ಟನ್ನು ವಿಚಾರಣಾಧೀನ ನ್ಯಾಯಾಲಯದಲ್ಲಿ ಠೇವಣಿ ಇಡಬೇಕೆಂದು ನ್ಯಾಯಾಲಯ ಷರತ್ತು ವಿಧಿಸಿದೆ.
ವಿಶೇಷ ನ್ಯಾಯಾಲಯ ಶಿಕ್ಷೆಯನ್ನು ಅಮಾನತುಗೊಳಿಸಿದ್ದು, ಅಪರಾಧಿಗಳಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಗುರುವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.