ಬೆಂಗಳೂರು: ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ.
ನವೆಂಬರ್ 18 ರ ತಾತ್ಕಾಲಿಕ ಆಯ್ಕೆ ಪಟ್ಟಿ ನಂತರದ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಮೀಸಲಾತಿಗೆ ಸಂಬಂಧಿಸಿದಂತೆ ಹಲವು ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿತ್ತು. ಒಬಿಸಿ ಮೀಸಲಾತಿಯಲ್ಲಿ ಪರಿಗಣಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ನ. 18 ರಂದು ಸರ್ಕಾರಿ ಶಾಲೆಗಳ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆಕ್ಷೇಪಣೆ ಆಹ್ವಾನಿಸಿ ಬಳಿಕ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.