ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಕುರಿತಾಗಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಮೇಲಿನ ತೀರ್ಪನ್ನು ಮಂಗಳವಾರ ಹೈಕೋರ್ಟ್ ಪ್ರಕಟಿಸಲಿದೆ. ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ ಸೀಬೆ ತನಿಖೆಗೆ ವರ್ಗಾಯಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯ ಪೀಠದಲ್ಲಿ ನಡೆದಿತ್ತು.
2024ರ ಸೆಪ್ಟೆಂಬರ್ 30ರಂದು ವಿಚಾರಣೆಯನ್ನು ಮುಕ್ತಾಯಗೊಳಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ತೀರ್ಪು ಪ್ರಕಟಣೆಯನ್ನು ದೈನಂದಿನ ಸೂಚಿತ ಪಟ್ಟಿಯಲ್ಲಿ ನಮೂದಿಸಲಾಗಿದೆ.